ಯಾವ ಮೋಹನ ಮುರಳಿ ಕರೆಯಿತು

ರಚನೆ: ಗೋಪಾಲಕೃಷ್ಣ ಅಡಿಗ 
ಗಾಯನ - : ರತ್ನಮಾಲ ಪ್ರಕಾಶ್
ಗಾಯನ - : ರಾಜು ಅನಂತಸ್ವಾಮಿ, ಸಂಗೀತ ಕಟ್ಟಿ
ಸಂಗೀತ: ಮಾನೋ ಮೂರ್ತಿ

ಯಾವ ಮೋಹನ ಮುರಳಿ ಕರೆಯಿತು

ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು

ಹೂವು ಹಾಸಿಗೆ ಚಂದ್ರ ಚಂದನ
ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ
ಕರಣ ಗಣದೀ ರಿಂಗನ

ಸಪ್ತ ಸಾಗರದಾಚೆ ಎಲ್ಲೊ
ಸುಪ್ತ ಸಾಗರ ಕಾದಿದೆ
ಮೊಳೆಯ ದಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ?

ವಿವಶವಾಯಿತು ಪ್ರಾಣ - ಹಾ!!
ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ

ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು
ಯಾವ ಬೃಂದಾವನವು ಚಾಚಿತು
ತನ್ನ ಮಿಂಚಿನ ಕಯ್ಯನು

ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು
!-- Facebook share button Start -->