ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ

ಚಿತ್ರತಿರುಗು ಬಾಣ
ರಚನೆ: ಅರ. ಏನ್. ಜಯಗೋಪಾಲ್ 
ಗಾಯನ: ಎಸ್. ಪಿ. ಬಾಲಸುಬ್ರಮಣ್ಯಂ


ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೆ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ
ಕರುನಾಡು ಸ್ವರ್ಗದ ಸೀಮೆ, ಕಾವೇರಿ ಹುಟ್ಟಿದ ನಾಡು,
ಕಲ್ಲಲಿ ಕಲೆಯನು ಕಂಡ, ಬೇಲೂರು ಶಿಲ್ಪದ ಬೀಡು
ಬಸವೇಶ್ವರ, ರನ್ನ-ಪಂಪರ ಸವಿ ವಾಣಿಯ ನಾಡು
ಚಾಮುಂಡಿ ರಕ್ಷೆಯು ನಮಗೆಗೊಮಟೆಷ ಕಾವಲು ಇಲ್ಲಿ,
ಶ್ರಿಂಗೇರಿ ಶಾರದೆ ವೀಣೆ, ರಸ ತುಂಗೆ ಆಗಿದೆ ಇಲ್ಲಿ,
ವಿಶ್ವಖ್ಯಾತಿಯ ವಿಶ್ವೇಶ್ವರಯ್ಯ ಜನಿಸಿದ ನಾಡು
ಏಳೇಳು ಜನ್ಮವೇ ಬರಲಿ ಮಣ್ಣಲಿ ನಾನು ಹುಟ್ಟುವೆ,
ಎನೇನು ಕಷ್ಟವೇ ಇರಲಿ ಸಿರಿಗನ್ನಡ ತಾಯ್ಗೆ ದುಡಿವೆ,
ತನು ಕನ್ನಡ ನುಡಿ ಕನ್ನಡ ಮನ ಕನ್ನಡವಾಗಿರಲಿ
ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ
ಎಲ್ಲೇ ಇರಲಿ ಹೇಗೆ ಇರಲಿ ಕನ್ನಡವೇ ನಮ್ಮ ಉಸಿರಲ್ಲಿ
ಇದೆ ನಾಡು ಇದೆ ಭಾಷೆ ಎಂದೆಂದೂ ನಮ್ಮದಾಗಿರಲಿ


!-- Facebook share button Start -->